ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.
Cross references
ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--
ಸಭೆಯು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ ಆದದ್ದೇನಂದರೆ, ಅವರು ಸಭೆಯ ಗುಡಾರದ ಕಡೆಗೆ ನೋಡಲಾಗಿ ಇಗೋ, ಮೇಘವು ಅದನ್ನು ಮುಚ್ಚಿ ಕೊಂಡು ಕರ್ತನ ಮಹಿಮೆಯು ಕಾಣಬಂತು.
ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
ಆಮೇಲೆ ನಾನು ಎದ್ದು ಬಯಲು ಸೀಮೆಯ ಕಡೆಗೆ ಹೋದೆನು; ಇಗೋ, ಕರ್ತನ ಮಹಿಮೆಯ ಅಲ್ಲಿ ನಿಂತಿದೆ. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿದೆ. ಆಗ ನಾನು ಮುಖ ಕೆಳಗಾಗಿ ಬಿದ್ದೆನು.
ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.
ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.
ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು.
ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರ ಗಿನ ಬಾಗಲಿನ ಉದ್ದವನ್ನೂ ಅಗಲವನ್ನೂ ಅಳೆದನು.
ಹೊರಗಡೆಯಲ್ಲಿ ಉತ್ತರದ ಬಾಗಲಿನ ಪ್ರವೇಶಕ್ಕೆ ಏರಿಹೋಗುವಲ್ಲಿ ಎರಡು ಮೇಜುಗಳೂ ಬಾಗಲಿನ ದ್ವಾರಾಂಗಣದ ಕಡೆಯಲ್ಲಿ ಎರಡು ಮೇಜುಗಳೂ ಇದ್ದವು.
ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ಆ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು.
ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.