Home Bibles ಯೆಹೆಜ್ಕೇಲ 44:8 · ಕನ್ನಡ ಬೈಬಲ್
ಯೆಹೆಜ್ಕೇಲ 44:8 · ಕನ್ನಡ ಬೈಬಲ್

ನೀವು ನನ್ನ ಪರಿಶುದ್ಧವಾದ ಜವಾಬ್ದಾರಿಯನ್ನು ಕೈಗೊಳ್ಳದೆ ಬೇರೆಯವರನ್ನು ಕಾಯುವದಕ್ಕೆ ನಿಮ್ಮ ಪರಿ ಶುದ್ದ ಸ್ಥಳದಲ್ಲಿ ಇರಿಸಿದ್ದೀರಿ.

Cross references

ಲೇವ್ಯಕಾಂಡ 22:2

ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್‌ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು.

ಲೇವ್ಯಕಾಂಡ 22:10

ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.

ಲೇವ್ಯಕಾಂಡ 22:13

ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು.

ಅಂಕೆಗಳ ಪುಸ್ತಕ 8:26

ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.

ಅಂಕೆಗಳ ಪುಸ್ತಕ 18:3

ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.

ಅಂಕೆಗಳ ಪುಸ್ತಕ 18:7

ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.

1 ದಿನವೃತ್ತಾಂತ 23:32

ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.

ಎಜ್ರಾ 8:24

ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೆರೆಬ್ಯನನ್ನೂ ಹಷಬ್ಯನನ್ನೂ ಅವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ

ಯೆಹೆಜ್ಕೇಲ 40:45

ಅವನು ನನಗೆ ಹೇಳಿದ್ದೇ ನಂದರೆ--ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.

ಯೆಹೆಜ್ಕೇಲ 44:14

ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು.

ಯೆಹೆಜ್ಕೇಲ 44:16

ಇವರು ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ನನಗೆ ಸೇವೆ ಮಾಡು ವದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಅವರು ನನ್ನ ಕಾಯಿದೆಯನ್ನು ಕೈಕೊಳ್ಳುವರು.

ಅಪೋಸ್ತಲರ ಕೃತ್ಯಗಳು 7:53

ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.

1 ತಿಮೋಥೆಯ 6:13

ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--

2 ತಿಮೋಥೆಯ 4:1

ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--

Interlinear

Choose Theme