ದೇಶದ ಪರಿಶುದ್ಧ ಭಾಗವು ಕರ್ತನಿಗೆ ಸೇವೆ ಮಾಡಲು ಸವಿಾಪಿ ಸುವಂತ, ಪರಿಶುದ್ಧ ಸ್ಥಳದ ಸೇವಕರಾದಂತ ಯಾಜಕರ ದಾಗಿರಬೇಕು; ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.
Cross references
ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
ಅವನು ನನಗೆ ಹೇಳಿದ್ದೇ ನಂದರೆ--ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.
ದೇವರಾದ ಕರ್ತನು ಹೇಳುವದೇನಂದರೆ--ನನಗೆ ಸೇವೆಮಾಡುವದಕ್ಕಾಗಿ ನನ್ನ ಬಳಿಗೆ ಸವಿಾಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯವರಿಗೂ ಪಾಪದ ಬಲಿಗಾಗಿ ಎಳೇ ಹೊರಿಯನ್ನು ಕೊಡಬೇಕು.
ಅವರು ಯಾಜಕರಾಗಿ ನನ್ನನ್ನು ಸವಿಾಪಿಸದೆ ಅತಿ ಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸವಿಾಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು.
ಇದು ಅವರಿಗೆ ಬಾಧ್ಯತೆಯಾಗಿರುವದು; ನಾನೇ ಅವರಿಗೆ ಬಾಧ್ಯನಾಗಿ ರುವೆನು; ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯ ವನ್ನು ಕೊಡಬಾರದು ಯಾಕಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು.
ಇದಲ್ಲದೆ ನೀವು ದೇಶವನ್ನು ಚೀಟುಹಾಕಿಸ್ವಾಸ್ತ್ಯವಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಕರ್ತನಿಗೆ ಕಾಣಿಕೆಯಾಗಿ ಕೊಡಬೇಕು; ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ, ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ.
ಅವರಿಗಾಗಿ ಅಂದರೆ ಯಾಜಕರಿಗಾಗಿ ಪರಿಶುದ್ಧ ಕಾಣಿಕೆ ಇರಬೇಕು, ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು; ಅದರ ಮಧ್ಯದಲ್ಲಿ ಕರ್ತನ ಪರಿಶುದ್ಧ ಸ್ಥಳವೂ ಇರಬೇಕು.