Home Bibles ಯೆಹೆಜ್ಕೇಲ 46:16 · ಕನ್ನಡ ಬೈಬಲ್
ಯೆಹೆಜ್ಕೇಲ 46:16 · ಕನ್ನಡ ಬೈಬಲ್

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರಧಾನನು ತನ್ನ ಕುಮಾರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಅದು ಬಾಧ್ಯವಾಗಿ ಅವರ ಸ್ವಾಸ್ತ್ಯವಾಗಿದೆ.

Cross references

ಆದಿಕಾಂಡ 25:5

ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು.

2 ದಿನವೃತ್ತಾಂತ 21:3

ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.

ಕೀರ್ತನೆಗಳು 37:18

ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.

ಮತ್ತಾಯ 25:34

ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;

ಲೂಕ 10:42

ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.

ಯೋಹಾನ 8:35

ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.

ರೋಮಾಪುರದವರಿಗೆ 8:15

ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.

ರೋಮಾಪುರದವರಿಗೆ 8:29

ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.

ಗಲಾತ್ಯದವರಿಗೆ 4:7

ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.

Interlinear

Choose Theme