Home Bibles ಯೆಹೆಜ್ಕೇಲ 47:10 · ಕನ್ನಡ ಬೈಬಲ್
ಯೆಹೆಜ್ಕೇಲ 47:10 · ಕನ್ನಡ ಬೈಬಲ್

ಏನ್‌ಗೆದಿ ಮೊದಲುಗೊಂಡು ಏನ್‌ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,

Cross references

ಅಂಕೆಗಳ ಪುಸ್ತಕ 34:6

ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.

ಯೆಹೋಶುವ 15:62

ನಿಬ್ಷಾನ್‌, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು.ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.

ಯೆಹೋಶುವ 23:4

ಇಗೋ, ನಾನು ಯೊರ್ದನ್‌ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು.

1 ಸಮುವೇಲ 23:29

ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.

2 ದಿನವೃತ್ತಾಂತ 20:2

ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್‌ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.

ಕೀರ್ತನೆಗಳು 104:25

ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ.

ಯೆಶಾಯ 49:12

ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್‌ ದೇಶದಿಂದ ಬರುತ್ತಿದ್ದಾರೆ.

ಯೆಶಾಯ 49:20

ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.

ಯೆಹೆಜ್ಕೇಲ 26:5

ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,

ಯೆಹೆಜ್ಕೇಲ 47:15

ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ;

ಯೆಹೆಜ್ಕೇಲ 48:28

ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್‌ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.

ಮತ್ತಾಯ 4:19

ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.

ಮತ್ತಾಯ 13:47

ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.

ಮಾರ್ಕ 1:17

ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.

ಲೂಕ 5:4

ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು.

ಯೋಹಾನ 21:3

ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ.

Interlinear

Choose Theme