Home Bibles ಯೆಹೆಜ್ಕೇಲ 47:19 · ಕನ್ನಡ ಬೈಬಲ್
ಯೆಹೆಜ್ಕೇಲ 47:19 · ಕನ್ನಡ ಬೈಬಲ್

ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್‌ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರಿನ ವರೆಗೂ ನದಿ ಮೊದಲುಗೊಂಡು ಮಹಾಸಮು ದ್ರದ ವರೆಗೂ ಇರುವದು. ಇದೇ ದಕ್ಷಿಣ ಭಾಗದ ದಕ್ಷಿಣದ ಮೇರೆ.

Cross references

ಅಂಕೆಗಳ ಪುಸ್ತಕ 20:1

ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಜಿನ್‌ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.

ಅಂಕೆಗಳ ಪುಸ್ತಕ 20:13

ಇಸ್ರಾಯೇಲ್‌ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.

ಅಂಕೆಗಳ ಪುಸ್ತಕ 34:5

ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.

ದ್ವಿತೀಯೋಪದೇಶಕಾಂಡ 32:51

ಕಾರಣವೇನಂದರೆ, ನೀವು ಜಿನ್‌ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್‌ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 33:8

ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್‌ ನಿನ್ನ ಊರೀಮ್‌ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;

ಯೆಹೋಶುವ 12:3

ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್‌ ಸಮುದ್ರದ ಪರಿಯಂತರ ವರೆಗೂ ಬೇತ್‌ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್‌ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ

1 ಅರಸುಗಳು 9:18

ಇದಲ್ಲದೆ ಸೊಲೊಮೋ ನನು ತನಗೆ ಉಂಟಾದ ಉಗ್ರಾಣದ ಪಟ್ಟಣಗಳನ್ನೂ ತನ್ನ ರಥಗಳಿಗೋಸ್ಕರ ಪಟ್ಟಣಗಳನ್ನೂ

2 ದಿನವೃತ್ತಾಂತ 20:2

ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್‌ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.

ಕೀರ್ತನೆಗಳು 81:7

ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.

ಯೆಶಾಯ 27:12

ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.

ಯೆಹೆಜ್ಕೇಲ 48:28

ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್‌ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.

Interlinear

Choose Theme