ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
Cross references
ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ
ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.
ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ.
ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,