ಯೆಹೆಜ್ಕೇಲ 8:14 · ಕನ್ನಡ ಬೈಬಲ್
ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್‌ಗೋಸ್ಕರ ಅಳುವ ಹೆಂಗಸರು ಕೂತಿದ್ದರು.
Cross references
ಯೆಹೆಜ್ಕೇಲ 44:4
ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.
ಯೆಹೆಜ್ಕೇಲ 46:9
ಆದರೆ ದೇಶದ ಜನರು ಪರಿಶುದ್ಧ ಹಬ್ಬಗಳಲ್ಲಿ ಕರ್ತನ ಮುಂದೆ ಬರುವಾಗ ಉತ್ತರದ ಬಾಗಲಿನಿಂದ ಪ್ರವೇಶಿಸಿ ಆರಾ ಧಿಸಿದ ಮೇಲೆ ಅವನು ದಕ್ಷಿಣ ಬಾಗಲಿನ ಮಾರ್ಗ ವಾಗಿ ಹೊರಗೆ ಹೋಗಬೇಕು. ದಕ್ಷಿಣ ಬಾಗಲಿನ ಮಾರ್ಗವಾಗಿ ಪ್ರವೇಶಿಸಿದವನು ಉತ್ತರ ಬಾಗಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಅವನು ಪ್ರವೇಶಿಸಿದ ಬಾಗಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು; ಆದರೆ ಅದಕ್ಕೆ ಎದುರಾಗಿ ಹೊರಗೆ ಹೋಗಬೇಕು.