ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
Cross references
ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು.
ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ
ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.
ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.
ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.