Home Bibles ಎಜ್ರಾ 10:5 · ಕನ್ನಡ ಬೈಬಲ್
ಎಜ್ರಾ 10:5 · ಕನ್ನಡ ಬೈಬಲ್

ಆಗ ಎಜ್ರನು ಎದ್ದು, ಪ್ರಧಾನಯಾಜಕರೂ ಲೇವಿಯರೂ ಸಮಸ್ತ ಇಸ್ರಾ ಯೇಲ್ಯರೂ ಈ ಮಾತಿನ ಪ್ರಕಾರವಾಗಿ ಮಾಡಲು ಅವರು ಆಣೆ ಇಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.

Cross references

ಎಜ್ರಾ 10:3

ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ.

ನೆಹೆಮ್ಯ 5:12

ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು.

ನೆಹೆಮ್ಯ 10:29

ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;

ನೆಹೆಮ್ಯ 13:25

ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;

ಸಾಮೇತಿಗಳು 1:5

ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.

ಸಾಮೇತಿಗಳು 9:9

ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.

ಸಾಮೇತಿಗಳು 15:23

ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!

ಸಾಮೇತಿಗಳು 25:11

ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.

ಸಾಮೇತಿಗಳು 27:9

ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.

ಮತ್ತಾಯ 26:63

ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.

Interlinear

Choose Theme