Home Bibles ಎಜ್ರಾ 2:1 · ಕನ್ನಡ ಬೈಬಲ್
ಎಜ್ರಾ 2:1 · ಕನ್ನಡ ಬೈಬಲ್

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ

Cross references

2 ಅರಸುಗಳು 24:14

ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.

2 ಅರಸುಗಳು 25:11

ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.

1 ದಿನವೃತ್ತಾಂತ 9:1

ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್‌ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

1 ದಿನವೃತ್ತಾಂತ 9:2

ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ.

2 ದಿನವೃತ್ತಾಂತ 36:1

ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು.

2 ದಿನವೃತ್ತಾಂತ 36:20

ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.

ಎಜ್ರಾ 2:70

ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.

ಎಜ್ರಾ 5:8

ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.

ಎಜ್ರಾ 6:2

ಮೇದ್ಯರ ದೇಶದಲ್ಲಿರುವ ಅಹ್ಮೆತಾ ಪಟ್ಟಣದಲ್ಲಿ ಬರೆ ಯಲ್ಪಟ್ಟ ಜ್ಞಾಪಕಾರ್ಥದ ಒಂದು ಸುರಳಿಯು ಅದರಲ್ಲಿ ಸಿಕ್ಕಿತು.

ನೆಹೆಮ್ಯ 7:6

ಅದರಲ್ಲಿ ಬರೆದ ದ್ದೇನಂದರೆ--ಬಾಬೆಲಿನ ಅರಸನಾದ ನೆಬೂಕದ್ನೆಚರನು ಸೆರೆಯಾಗಿ ತಕ್ಕೊಂಡು ಹೋದವರು ಸೆರೆಯಾಗಿ ಒಯ್ಯಲ್ಪಟ್ಟು ಸೆರೆಯಿಂದ ಹೊರಟು ಯೆರೂಸಲೇ ಮಿಗೂ ಯೆಹೂದಕ್ಕೂ

ನೆಹೆಮ್ಯ 12:1

ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನ ಸಂಗಡಲೂ ಯೇಷೂವನ ಸಂಗ ಡಲೂ ಹೋದ ಯಾಜಕರೂ ಲೇವಿಯರೂ ಯಾರ ಂದರೆ,

ಎಸ್ತೇರ್ 1:1

ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;

ಎಸ್ತೇರ್ 1:3

ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.

ಎಸ್ತೇರ್ 1:8

ಕುಡಿಯು ವದು ಆಜ್ಞಾನುಸಾರವಾಗಿತ್ತು; ಯಾರೂ ಬಲವಂತ ಮಾಡಲಿಲ್ಲ; ಹೀಗೆ ಅರಸನು ತನ್ನ ಮನೆ ವಾರ್ತೆಯ ವರಿಗೆಲ್ಲಾ ಪ್ರತಿ ಮನುಷ್ಯನ ಇಷ್ಟದ ಪ್ರಕಾರ ಮಾಡುವಂತೆ ಅವರಿಗೆ ನೇಮಿಸಿದ್ದನು.

ಎಸ್ತೇರ್ 1:11

ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.

ಎಸ್ತೇರ್ 8:9

ಆಗ ಅದೇ ಕಾಲದಲ್ಲಿ ಶೀವಾನ್‌ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.

ಯೆಶಾಯ 48:20

ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.

ಯೆರೆಮಿಯ 39:1

ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.

ಯೆರೆಮಿಯ 50:19

ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.

ವಿಲಾಪಗಳು 1:3

ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.

ವಿಲಾಪಗಳು 1:5

ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.

ವಿಲಾಪಗಳು 4:22

ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.

ಸೆಫನ್ಯ 2:7

ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.

ಅಪೋಸ್ತಲರ ಕೃತ್ಯಗಳು 23:34

ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.

Interlinear

Choose Theme