Home Bibles ಎಜ್ರಾ 3:5 · ಕನ್ನಡ ಬೈಬಲ್
ಎಜ್ರಾ 3:5 · ಕನ್ನಡ ಬೈಬಲ್

ಅದರ ತರುವಾಯ ಅವರು ನಿತ್ಯವು ತಿಂಗಳ ಮೊದಲನೇ ದಿನದಲ್ಲಿಯೂ ಕರ್ತನ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಅರ್ಪಿಸುವ ದಹನಬಲಿಯನ್ನು ಅವನವನು ಕರ್ತನಿಗೆ ಅರ್ಪಿ ಸುವ ಉಚಿತಾರ್ಥವಾದ ಬಲಿಯನ್ನು ಅರ್ಪಿಸಿದರು.

Cross references

ನಿರ್ಗಮಕಾಂಡ 29:38

ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.

ಲೇವ್ಯಕಾಂಡ 1:2

ಇಸ್ರಾಯೇಲ್‌ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.

ಲೇವ್ಯಕಾಂಡ 1:3

ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.

ಲೇವ್ಯಕಾಂಡ 23:2

ಇಸ್ರಾಯೇಲ್‌ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ,

ಅಂಕೆಗಳ ಪುಸ್ತಕ 28:3

ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.

ಅಂಕೆಗಳ ಪುಸ್ತಕ 28:11

ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ

ಅಂಕೆಗಳ ಪುಸ್ತಕ 28:14

ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.

ಅಂಕೆಗಳ ಪುಸ್ತಕ 28:19

ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.

ಅಂಕೆಗಳ ಪುಸ್ತಕ 28:27

ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ

ಅಂಕೆಗಳ ಪುಸ್ತಕ 29:2

ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು.

ಅಂಕೆಗಳ ಪುಸ್ತಕ 29:8

ಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂ

ಅಂಕೆಗಳ ಪುಸ್ತಕ 29:13

ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;

ಅಂಕೆಗಳ ಪುಸ್ತಕ 29:39

ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದುಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಹೇಳಿದನು.

ದ್ವಿತೀಯೋಪದೇಶಕಾಂಡ 12:6

ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.

ದ್ವಿತೀಯೋಪದೇಶಕಾಂಡ 12:17

ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.

2 ದಿನವೃತ್ತಾಂತ 29:31

ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.

2 ದಿನವೃತ್ತಾಂತ 31:14

ಇದಲ್ಲದೆ ಲೇವಿಯನಾಗಿರುವ ಇಮ್ನನ ಮಗನಾದ ಕೋರೆ ಎಂಬವನು ಪೂರ್ವದಿಕ್ಕಿ ನಲ್ಲಿರುವ ದ್ವಾರಪಾಲಕನು ಕರ್ತನ ಕಾಣಿಕೆಗಳನ್ನೂ ಮಹಾ ಪರಿಶುದ್ಧವಾದವುಗಳನ್ನೂ ಪಾಲು ಹಂಚುವ ದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಅರ್ಪಣೆ ಗಳ ಮೇಲೆ ಇದ್ದನು.

ನೆಹೆಮ್ಯ 10:34

ನ್ಯಾಯಪ್ರಮಾಣದಲ್ಲಿ ಬರೆದ ಹಾಗೆ, ನಮ್ಮ ದೇವರಾಗಿರುವ ಕರ್ತನ ಬಲಿಪೀಠದ ಮೇಲೆ ಸುಡು ವದಕ್ಕೆ ನೇಮಿಸಲ್ಪಟ್ಟ ಕಾಲಗಳಲ್ಲಿ ವರುಷ ವರುಷಕ್ಕೆ ನಮ್ಮ ಪಿತೃಗಳ ಮನೆಗಳ ಪ್ರಕಾರ ನಮ್ಮ ದೇವರ ಆಲಯದೊಳಗೆ ತಕ್ಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ ಲೇವಿಯರಿಗೂ ಜನರಿಗೂ ಚೀಟುಗಳನ್ನು ಹಾಕಿದೆವು.

Interlinear

Choose Theme