ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
Cross references
ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು.
ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.
ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.
ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.
ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.
ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು.
ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು.
ಹೀಗೆ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ --ನನ್ನ ಒಡೆಯನೇ, ಇವೇನು ಅಂದೆನು.
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.