ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್ ಮಕ್ಕಳು ಇಸ್ರಾಯೇಲ್ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು.ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
Cross references
ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು.
ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.
ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು.
ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ.
ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.
ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ;
ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.