Home Bibles ಎಜ್ರಾ 6:5 · ಕನ್ನಡ ಬೈಬಲ್
ಎಜ್ರಾ 6:5 · ಕನ್ನಡ ಬೈಬಲ್

ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ.

Cross references

2 ಅರಸುಗಳು 24:13

ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.

2 ಅರಸುಗಳು 25:14

ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು.

2 ದಿನವೃತ್ತಾಂತ 36:6

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.

2 ದಿನವೃತ್ತಾಂತ 36:10

ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.

2 ದಿನವೃತ್ತಾಂತ 36:18

ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.

ಎಜ್ರಾ 1:7

ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು.

ಎಜ್ರಾ 5:14

ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ--

ಯೆರೆಮಿಯ 27:16

ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.

ದಾನಿಯೇಲ 1:2

ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್‌ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.

ದಾನಿಯೇಲ 5:2

ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು.

Interlinear

Choose Theme