Home Bibles ಎಜ್ರಾ 6:8 · ಕನ್ನಡ ಬೈಬಲ್
ಎಜ್ರಾ 6:8 · ಕನ್ನಡ ಬೈಬಲ್

ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ.

Cross references

ಎಜ್ರಾ 4:16

ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.

ಎಜ್ರಾ 4:20

ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.

ಎಜ್ರಾ 4:23

ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರು.ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.

ಎಜ್ರಾ 5:5

ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು.

ಎಜ್ರಾ 6:4

ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ.

ಎಜ್ರಾ 6:14

ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್‌ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.

ಎಜ್ರಾ 7:15

ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್‌ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ

ನೆಹೆಮ್ಯ 2:8

ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.

ನೆಹೆಮ್ಯ 11:23

ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.

ಕೀರ್ತನೆಗಳು 68:29

ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.

ಹಗ್ಗಾಯ 2:8

ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

Interlinear

Choose Theme