Home Bibles ಎಜ್ರಾ 7:28 · ಕನ್ನಡ ಬೈಬಲ್
ಎಜ್ರಾ 7:28 · ಕನ್ನಡ ಬೈಬಲ್

ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.

Cross references

ಆದಿಕಾಂಡ 32:28

ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.

ಆದಿಕಾಂಡ 43:14

ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.

ಎಜ್ರಾ 5:5

ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು.

ಎಜ್ರಾ 7:6

ಈ ಎಜ್ರನು ಇಸ್ರಾ ಯೇಲ್‌ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.

ಎಜ್ರಾ 7:9

ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.

ಎಜ್ರಾ 7:14

ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ

ಎಜ್ರಾ 8:15

ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ ಯಾಜಕ ರನ್ನೂ ಶೋಧಿಸಿ ನೋಡುವಾಗ ಲೇವಿಯರ ಕುಮಾರ ರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.

ಎಜ್ರಾ 8:18

ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ

ಎಜ್ರಾ 9:9

ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.

ನೆಹೆಮ್ಯ 1:11

ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.

ನೆಹೆಮ್ಯ 2:8

ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.

ಯೋನ 3:7

ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ;

2 ತಿಮೋಥೆಯ 4:17

ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.

Interlinear

Choose Theme