Home Bibles ☰ Books ಎಜ್ರಾ 8:30 · ಕನ್ನಡ ಬೈಬಲ್
ಎಜ್ರಾ 8:30 · ಕನ್ನಡ ಬೈಬಲ್

ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.

Cross references

1 ದಿನವೃತ್ತಾಂತ 29:2

ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.

ಎಜ್ರಾ 8:22

ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.

ಕೀರ್ತನೆಗಳು 122:9

ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.

ಯೆಶಾಯ 60:13

ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.

Interlinear

Choose Theme