Home Bibles ಎಜ್ರಾ 9:10 · ಕನ್ನಡ ಬೈಬಲ್
ಎಜ್ರಾ 9:10 · ಕನ್ನಡ ಬೈಬಲ್

ಹಾಗಾದರೆ ನನ್ನ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ಪ್ರವಾದಿಗಳಾದ ನಿನ್ನ ಸೇವಕರ ಮುಖಾಂತರ ನೀನು ಆಜ್ಞಾಪಿಸಿದ ನಿನ್ನ ಆಜ್ಞೆಗಳನ್ನು ತೊರೆದಿದ್ದೇವೆ.

Cross references

ಆದಿಕಾಂಡ 44:16

ಯೆಹೂದನು--ನಾವು ನಮ್ಮ ಒಡೆಯ ನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನಿರ್ದೋಷಿಗಳೆಂದು ತೋರಿಸಿ ಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಕಂಡುಕೊಂಡಿದ್ದಾನೆ. ಇಗೋ, ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನೂ ನಾವೂ ನಮ್ಮ ಒಡೆಯ ನಿಗೆ ದಾಸರಾಗಿದ್ದೇವೆ ಅಂದನು.

ಯೆಹೋಶುವ 7:8

ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ.

ನೆಹೆಮ್ಯ 9:30

ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.

ನೆಹೆಮ್ಯ 9:34

ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.

ಕೀರ್ತನೆಗಳು 106:6

ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.

ವಿಲಾಪಗಳು 3:22

ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.

ದಾನಿಯೇಲ 9:4

ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,

ರೋಮಾಪುರದವರಿಗೆ 3:19

ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

Interlinear

Choose Theme