Home Bibles ☰ Books ಗಲಾತ್ಯದವರಿಗೆ 5:13 · ಕನ್ನಡ ಬೈಬಲ್
ಗಲಾತ್ಯದವರಿಗೆ 5:13 · ಕನ್ನಡ ಬೈಬಲ್

ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.

Cross references

ಯೆಶಾಯ 61:1

ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಮಾರ್ಕ 10:43

ಆದರೆ ನಿಮ್ಮೊಳಗೆ ಹಾಗಿರಬಾರದು; ಮತ್ತು ನಿಮ್ಮೊಳಗೆ ದೊಡ್ಡವನಾಗಿರ ಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು.

ಲೂಕ 4:18

ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

ಯೋಹಾನ 8:32

ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.

ಯೋಹಾನ 13:14

ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು.

ಅಪೋಸ್ತಲರ ಕೃತ್ಯಗಳು 20:35

ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.

ರೋಮಾಪುರದವರಿಗೆ 6:18

ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.

ರೋಮಾಪುರದವರಿಗೆ 15:1

ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.

1 ಕೊರಿಂಥದವರಿಗೆ 8:9

ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ.

1 ಕೊರಿಂಥದವರಿಗೆ 9:19

ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.

1 ಕೊರಿಂಥದವರಿಗೆ 13:4

ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,

2 ಕೊರಿಂಥದವರಿಗೆ 2:8

ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

Interlinear

Choose Theme