Home Bibles ಗಲಾತ್ಯದವರಿಗೆ 6:6 · ಕನ್ನಡ ಬೈಬಲ್
ಗಲಾತ್ಯದವರಿಗೆ 6:6 · ಕನ್ನಡ ಬೈಬಲ್

ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.

Cross references

ಅಂಕೆಗಳ ಪುಸ್ತಕ 18:31

ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಇದು ಸಭೆಯ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ನಿಮಗೆ ಪ್ರತಿಫಲ ವಾಗಿದೆ.ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್‌ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.

ದ್ವಿತೀಯೋಪದೇಶಕಾಂಡ 12:19

ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.

ನೆಹೆಮ್ಯ 10:36

ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು;

ಮತ್ತಾಯ 10:10

ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.

ರೋಮಾಪುರದವರಿಗೆ 15:27

ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.

1 ಕೊರಿಂಥದವರಿಗೆ 9:9

ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ?

1 ತಿಮೋಥೆಯ 5:17

ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.

Interlinear

Choose Theme