ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು.
Cross references
ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,
ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
ಯಾಕಂದರೆ ಭೂಮಿಯು ಮೊದಲು ಮೊಳಕೆಯನ್ನು ಆಮೇಲೆ ತೆನೆಯನ್ನು ಇದಾದ ಮೇಲೆ ತೆನೆಯಲ್ಲಿ ಪೂರ್ಣಕಾಳನ್ನು ತನ್ನಷ್ಟಕ್ಕೆ ತಾನೇ ಫಲಿಸುತ್ತದೆ.
ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.