Home Bibles ಆದಿಕಾಂಡ 1:30 · ಕನ್ನಡ ಬೈಬಲ್
ಆದಿಕಾಂಡ 1:30 · ಕನ್ನಡ ಬೈಬಲ್

ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.

Cross references

ಆದಿಕಾಂಡ 6:21

ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.

ಆದಿಕಾಂಡ 9:3

ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.

ಯೋಬ 38:39

ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ?

ಯೋಬ 39:4

ಅವುಗಳ ಮರಿಗಳು ಚಂದವಾಗಿದ್ದು ಪೈರಿನಲ್ಲಿ ಬೆಳೆಯುತ್ತವೆ; ಅವು ಹೊರಟು ಹೋಗಿ ಅವುಗಳ ಬಳಿಗೆ ತಿರುಗಿ ಬರುವದಿಲ್ಲ.

ಯೋಬ 39:8

ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.

ಯೋಬ 39:30

ಅದರ ಮರಿ ಗಳು ರಕ್ತವನ್ನು ಹೀರುತ್ತವೆ; ಹೆಣ ಇದ್ದಲ್ಲೇ ಅದು ಇರುವದು.

ಯೋಬ 40:15

ನಾನು ನಿನ್ನ ಕೂಡ ನಿರ್ಮಿಸಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆ.

ಯೋಬ 40:20

ನಿಶ್ಚಯ ವಾಗಿ ಪರ್ವತಗಳು ಅದಕ್ಕೆ ಮೇವು ಕೊಡುತ್ತವೆ; ಅಡವಿಯ ಎಲ್ಲಾ ಮೃಗಗಳು ಅಲ್ಲಿ ಆಡುತ್ತವೆ.

ಕೀರ್ತನೆಗಳು 104:14

ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.

ಕೀರ್ತನೆಗಳು 145:15

ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.

ಕೀರ್ತನೆಗಳು 147:9

ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.

Interlinear

Choose Theme