ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು.
Cross references
ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು.
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.
ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.
ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
ದಾನ್ ಮತ್ತು ಯಾವಾನ್ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.
ಮನುಷ್ಯಪುತ್ರನೇ, ಮೆಷೆಕ್ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು
ಗೋಮೆರ್ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.
ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ.
ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;
ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.