Home Bibles ☰ Books ಆದಿಕಾಂಡ 12:20 · ಕನ್ನಡ ಬೈಬಲ್
ಆದಿಕಾಂಡ 12:20 · ಕನ್ನಡ ಬೈಬಲ್

ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.

Cross references

ನಿರ್ಗಮಕಾಂಡ 18:27

ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.

1 ಸಮುವೇಲ 29:6

ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ--ನಿಜವಾಗಿಯೂ ಕರ್ತನಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವದು ನನ್ನ ದೃಷ್ಟಿಗೆ ಒಳ್ಳೇದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡದ್ದಿಲ್ಲ.

ಕೀರ್ತನೆಗಳು 105:14

ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು.

ಸಾಮೇತಿಗಳು 21:1

ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.

Interlinear

Choose Theme