Home Bibles ಆದಿಕಾಂಡ 13:10 · ಕನ್ನಡ ಬೈಬಲ್
ಆದಿಕಾಂಡ 13:10 · ಕನ್ನಡ ಬೈಬಲ್

ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.

Cross references

ಆದಿಕಾಂಡ 2:8

ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.

ಆದಿಕಾಂಡ 3:6

ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.

ಆದಿಕಾಂಡ 6:2

ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.

ಆದಿಕಾಂಡ 14:2

ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.

ಆದಿಕಾಂಡ 14:8

ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು

ಆದಿಕಾಂಡ 19:17

ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.

ಆದಿಕಾಂಡ 19:24

ಆಗ ಕರ್ತನು ಸೊದೋಮ್‌ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.

ಆದಿಕಾಂಡ 19:25

ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.

ಅಂಕೆಗಳ ಪುಸ್ತಕ 32:1

ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.

ದ್ವಿತೀಯೋಪದೇಶಕಾಂಡ 34:3

ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.

1 ಅರಸುಗಳು 7:46

ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.

ಕೀರ್ತನೆಗಳು 107:34

ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.

ಯೆಶಾಯ 15:5

ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್‌ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.

ಯೆಶಾಯ 51:3

ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್‌ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.

ಯೆರೆಮಿಯ 48:34

ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--

ಯೆಹೆಜ್ಕೇಲ 28:13

ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

ಯೆಹೆಜ್ಕೇಲ 31:8

ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.

ಯೋವೇಲ 2:3

ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್‌ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.

1 ಯೋಹಾನ 2:15

ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.

Interlinear

Choose Theme