ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು.
Cross references
ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.
ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ.
ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು--
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.