ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು.
Cross references
ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ಆಗ ಅವರು ಸೊದೋಮ್ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು.
ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ
ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು.
ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು.
ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.