ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
Cross references
ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.
ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.
ಅವನು ಹಾಗರಳನ್ನು ಕೂಡಿದಾಗ ಗರ್ಭಿಣಿ ಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ ಅವಳ ಯಜಮಾನಿಯು ಅವಳ ದೃಷ್ಟಿಯಲ್ಲಿ ತಿರಸ್ಕರಿಸ ಲ್ಪಟ್ಟಳು.
ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
ಆ ಮುದುಕನು ತನ್ನ ಕಣ್ಣುಗಳನ್ನೆತ್ತಿ ಆ ಪಟ್ಟಣದ ಬೀದಿಯಲ್ಲಿ ಕುಳಿ ತಿದ್ದ ಮಾರ್ಗದವನನ್ನು ನೋಡಿ--ನೀನು ಎಲ್ಲಿಗೆ ಹೋಗುತ್ತೀ? ಎಲ್ಲಿಂದ ಬಂದೆ ಅಂದನು.
ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ.
ದೇವರ ನಾಮಕ್ಕೂ ಆತನ ಬೋಧನೆಗೂ ದೂಷಣೆ ಉಂಟಾಗದಂತೆ ನೊಗದ ಅಧೀನದಲ್ಲಿರುವ ಸೇವಕರೆಲ್ಲರೂ ತಮ್ಮ ಸ್ವಂತ ಯಜಮಾನರನ್ನೂ ಎಲ್ಲಾ ಮಾನಕ್ಕೂ ಯೋಗ್ಯರೆಂದೆ ಣಿಸಲಿ.