ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
Cross references
ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.
ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ
ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ
ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.
ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು.
ಆದರೆ ಹಣಕ್ಕೆ ತೆಗೆದುಕೊಂಡ ಪ್ರತಿ ಯೊಬ್ಬನ ಸೇವಕನನ್ನು ನೀನು ಸುನ್ನತಿಮಾಡಿಸಿದ ತರುವಾಯ ಅವನು ಅದನ್ನು ತಿನ್ನಬಹುದು.
ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ.
ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.
ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ.
ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.