ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
Cross references
ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು.
ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.
ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು.
ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್
ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.