Home Bibles ಆದಿಕಾಂಡ 18:2 · ಕನ್ನಡ ಬೈಬಲ್
ಆದಿಕಾಂಡ 18:2 · ಕನ್ನಡ ಬೈಬಲ್

ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--

Cross references

ಆದಿಕಾಂಡ 18:16

ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.

ಆದಿಕಾಂಡ 18:22

ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.

ಆದಿಕಾಂಡ 19:1

ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್‌ಗೆ ಬಂದಾಗ ಲೋಟನು ಸೊದೋ ಮ್‌ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ

ಆದಿಕಾಂಡ 23:7

ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ

ಆದಿಕಾಂಡ 23:12

ಆಗ ಅಬ್ರಹಾಮನು ಆ ದೇಶದ ಜನರ ಮುಂದೆ ಬಾಗಿ ಕೊಂಡನು.

ಆದಿಕಾಂಡ 32:24

ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.

ಆದಿಕಾಂಡ 33:3

ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವ ವರೆಗೆ ಏಳು ಸಾರಿ ನೆಲದ ವರೆಗೆ ಬೊಗ್ಗಿದನು.

ಆದಿಕಾಂಡ 42:6

ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.

ಆದಿಕಾಂಡ 43:26

ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.

ಆದಿಕಾಂಡ 43:28

ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.

ಆದಿಕಾಂಡ 44:14

ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು.

ಆದಿಕಾಂಡ 48:12

ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.

ಯೆಹೋಶುವ 5:13

ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.

ನ್ಯಾಯಾಧಿಪತಿಗಳು 13:3

ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.

ನ್ಯಾಯಾಧಿಪತಿಗಳು 13:6

ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.

ರೂತ 2:10

ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು.

2 ಅರಸುಗಳು 2:15

ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.

ರೋಮಾಪುರದವರಿಗೆ 12:13

ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.

ಹೆಬ್ರಿಯರಿಗೆ 13:2

ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.

1 ಪೇತ್ರ 4:9

ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.

Interlinear

Choose Theme