ಆದಿಕಾಂಡ 18:33 · ಕನ್ನಡ ಬೈಬಲ್
ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
Cross references
ಆದಿಕಾಂಡ 17:22
ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.
ಆದಿಕಾಂಡ 18:16
ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.
ಆದಿಕಾಂಡ 18:22
ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.
ಆದಿಕಾಂಡ 31:55
ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ಆದಿಕಾಂಡ 32:1
ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು.
ಆದಿಕಾಂಡ 32:26
ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.