ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
Cross references
ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?
ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
ನಿನ್ನ ಹಾಗಿ ರುವ ಮನುಷ್ಯನಿಗೆ ನಿನ್ನ ದುಷ್ಟತ್ವವು ಕೇಡು ಮಾಡ ಬಹುದು. ಮನುಷ್ಯನ ಮಗನಿಗೆ ನಿನ್ನ ನೀತಿಯು ಲಾಭ ಮಾಡಬಹುದು.
ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ
ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು.
ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ.
ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.