ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು.
Cross references
ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.
ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು.
ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ!
ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.