ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
Cross references
ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರು ಷನೊಂದಿಗೆ ಮಲಗಬಾರದು; ಅದು ಅಸಹ್ಯವಾದದ್ದು.
ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.
ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ.
ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.
ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.