Home Bibles ಆದಿಕಾಂಡ 20:15 · ಕನ್ನಡ ಬೈಬಲ್
ಆದಿಕಾಂಡ 20:15 · ಕನ್ನಡ ಬೈಬಲ್

ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.

Cross references

ಆದಿಕಾಂಡ 13:9

ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.

ಆದಿಕಾಂಡ 34:10

ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು.

ಆದಿಕಾಂಡ 42:34

ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.

ಆದಿಕಾಂಡ 47:6

ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್‌ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.

Interlinear

Choose Theme