Home Bibles ಆದಿಕಾಂಡ 20:17 · ಕನ್ನಡ ಬೈಬಲ್
ಆದಿಕಾಂಡ 20:17 · ಕನ್ನಡ ಬೈಬಲ್

ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.

Cross references

ಆದಿಕಾಂಡ 12:17

ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.

ಆದಿಕಾಂಡ 20:7

ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.

ಆದಿಕಾಂಡ 29:31

ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.

1 ಸಮುವೇಲ 5:11

ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್‌ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.

ಎಜ್ರಾ 6:10

ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.

ಯೋಬ 42:9

ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.

ಸಾಮೇತಿಗಳು 15:8

ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.

ಸಾಮೇತಿಗಳು 15:29

ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ.

ಯೆಶಾಯ 45:11

ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?

ಮತ್ತಾಯ 7:7

ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.

ಮತ್ತಾಯ 21:22

ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.

ಅಪೋಸ್ತಲರ ಕೃತ್ಯಗಳು 3:24

ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.

ಫಿಲಿಪ್ಪಿಯವರಿಗೆ 4:6

ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.

1 ತೆಸಲೋನಿಕದವರಿಗೆ 5:25

ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.

ಯಾಕೋಬ 5:16

ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.

Interlinear

Choose Theme