Home Bibles ಆದಿಕಾಂಡ 21:10 · ಕನ್ನಡ ಬೈಬಲ್
ಆದಿಕಾಂಡ 21:10 · ಕನ್ನಡ ಬೈಬಲ್

ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.

Cross references

ಆದಿಕಾಂಡ 17:19

ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.

ಆದಿಕಾಂಡ 17:21

ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.

ಆದಿಕಾಂಡ 20:11

ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.

ಆದಿಕಾಂಡ 22:10

ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವದಕ್ಕೆ ಕತ್ತಿ ತೆಗೆದುಕೊಂಡನು.

ಆದಿಕಾಂಡ 25:6

ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.

ಆದಿಕಾಂಡ 25:19

ಅಬ್ರಹಾಮನ ಮಗನಾದ ಇಸಾಕನ ವಂಶಾವಳಿ ಗಳು ಇವೇ; ಅಬ್ರಹಾಮನಿಂದ ಇಸಾಕನು ಹುಟ್ಟಿದನು.

ಆದಿಕಾಂಡ 36:6

ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್‌ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.

ನ್ಯಾಯಾಧಿಪತಿಗಳು 11:2

ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಕುಮಾರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ--ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ; ಯಾಕಂದರೆ ನೀನು ಪರಸ್ತ್ರೀಯ ಮಗನು ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಮತ್ತಾಯ 8:11

ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಅವರೊಂದಿಗೆ ಕೂತುಕೊಳ್ಳುವರು.

ಮತ್ತಾಯ 22:13

ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.

ಯೋಹಾನ 8:35

ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.

ಗಲಾತ್ಯದವರಿಗೆ 3:18

ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.

ಗಲಾತ್ಯದವರಿಗೆ 4:7

ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.

ಗಲಾತ್ಯದವರಿಗೆ 4:22

ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.

1 ಪೇತ್ರ 1:4

ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.

1 ಯೋಹಾನ 2:19

ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.

Interlinear

Choose Theme