Home Bibles ಆದಿಕಾಂಡ 21:15 · ಕನ್ನಡ ಬೈಬಲ್
ಆದಿಕಾಂಡ 21:15 · ಕನ್ನಡ ಬೈಬಲ್

ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ

Cross references

ಆದಿಕಾಂಡ 21:14

ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.

ನಿರ್ಗಮಕಾಂಡ 15:22

ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.

ನಿರ್ಗಮಕಾಂಡ 17:1

ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್‌ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.

2 ಅರಸುಗಳು 3:9

ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು.

ಕೀರ್ತನೆಗಳು 63:1

ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.

ಯೆಶಾಯ 44:12

ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.

ಯೆರೆಮಿಯ 14:3

ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.

Interlinear

Choose Theme