Home Bibles ಆದಿಕಾಂಡ 23:20 · ಕನ್ನಡ ಬೈಬಲ್
ಆದಿಕಾಂಡ 23:20 · ಕನ್ನಡ ಬೈಬಲ್

ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.

Cross references

ಆದಿಕಾಂಡ 25:9

ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.

ಆದಿಕಾಂಡ 25:10

ಅಬ್ರಹಾಮನು ಹೇತನ ಮಕ್ಕಳಿಂದ ತಕ್ಕೊಂಡ ಹೊಲದಲ್ಲಿ ಅಬ್ರಹಾಮನೂ ಅವನ ಹೆಂಡತಿಯಾದ ಸಾರಳೂ ಹೂಣಿಡಲ್ಪಟ್ಟರು.

ಆದಿಕಾಂಡ 49:29

ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ

ಆದಿಕಾಂಡ 49:31

ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.

ಆದಿಕಾಂಡ 50:5

ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್‌ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.

ಆದಿಕಾಂಡ 50:13

ಅವನ ಕುಮಾರರು ಅವನನ್ನು ಕಾನಾನ್‌ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.

ಆದಿಕಾಂಡ 50:24

ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.

ರೂತ 4:7

ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು.

2 ಸಮುವೇಲ 24:24

ಆದರೆ ಅರಸನು ಅರೌನನಿಗೆ--ಹಾಗಲ್ಲ; ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಉಚಿತವಾಗಿ ಬಂದ ದಹನ ಬಲಿಗಳನ್ನು ನನ್ನ ದೇವರಾದ ಕರ್ತನಿಗೆ ಅರ್ಪಿ ಸೆನು ಅಂದನು. ಹೀಗೆ ದಾವೀದನು ಆ ಕಣವನ್ನೂ ಎತ್ತುಗಳನ್ನೂ ಐವತ್ತು ಶೇಕೆಲ್‌ ಬೆಳ್ಳಿಗೆ ಕೊಂಡು ಕೊಂಡನು.ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.

2 ಅರಸುಗಳು 21:18

ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.

ಯೆರೆಮಿಯ 32:10

ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ

Interlinear

Choose Theme