ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.
Cross references
ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು.
ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.
ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.
ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು.
ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು.