ಆದಿಕಾಂಡ 24:56 · ಕನ್ನಡ ಬೈಬಲ್
ಆಗ ಅವನು ಅವರಿಗೆ--ನನ್ನನ್ನು ತಡೆಯಬೇಡಿರಿ; ಕರ್ತನು ನನ್ನ ಮಾರ್ಗವನ್ನು ಸಫಲಮಾಡಿದ್ದಾನಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವ ಹಾಗೆ ನನ್ನನ್ನು ಕಳುಹಿಸಿರಿ ಅಂದನು.
Cross references
ಆದಿಕಾಂಡ 45:9
ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;
ಯೆಹೋಶುವ 1:8
ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
ಸಾಮೇತಿಗಳು 25:25
ಬಾಯಾರಿದವನಿಗೆ ತಣ್ಣೀರು ಹೇಗೋ ದೂರ ದೇಶ ದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
ಯೆಶಾಯ 48:15
ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.