Home Bibles ಆದಿಕಾಂಡ 25:18 · ಕನ್ನಡ ಬೈಬಲ್
ಆದಿಕಾಂಡ 25:18 · ಕನ್ನಡ ಬೈಬಲ್

ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.

Cross references

ಆದಿಕಾಂಡ 2:11

ಮೊದಲನೆಯದರ ಹೆಸರು ಪೀಶೋನ್‌; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ.

ಆದಿಕಾಂಡ 10:7

ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್‌ ಎಂಬವರು.

ಆದಿಕಾಂಡ 10:29

ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು.

ಆದಿಕಾಂಡ 13:10

ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.

ಆದಿಕಾಂಡ 14:10

ಸಿದ್ದೀಮ್‌ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್‌ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.

ಆದಿಕಾಂಡ 16:7

ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು

ಆದಿಕಾಂಡ 16:12

ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.

ಆದಿಕಾಂಡ 20:1

ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.

ಆದಿಕಾಂಡ 21:14

ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.

ಆದಿಕಾಂಡ 21:21

ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.

ನಿರ್ಗಮಕಾಂಡ 15:22

ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.

1 ಸಮುವೇಲ 15:7

ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.

2 ಅರಸುಗಳು 23:29

ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್‌ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.

1 ದಿನವೃತ್ತಾಂತ 1:23

ಶೆಬಾನನ್ನೂ, ಓಫೀರನನ್ನೂ ಹವೀಲಾನನ್ನೂ, ಯೋಬಾಬನನ್ನೂ ಪಡೆದನು. ಇವ ರೆಲ್ಲರು ಯೊಕ್ತಾನನ ಮಕ್ಕಳು.

ಕೀರ್ತನೆಗಳು 78:64

ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ.

ಯೆಶಾಯ 19:23

ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.

Interlinear

Choose Theme