Home Bibles ಆದಿಕಾಂಡ 25:3 · ಕನ್ನಡ ಬೈಬಲ್
ಆದಿಕಾಂಡ 25:3 · ಕನ್ನಡ ಬೈಬಲ್

ಯೊಕ್ಷಾನನಿಂದ ಶೆಬಾ ದೆದಾನ್‌ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ.

Cross references

2 ಸಮುವೇಲ 2:9

ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.

1 ಅರಸುಗಳು 10:1

ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.

ಯೋಬ 6:19

ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ.

ಕೀರ್ತನೆಗಳು 72:10

ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.

ಯೆಶಾಯ 21:13

ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.

ಯೆರೆಮಿಯ 25:23

ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.

ಯೆರೆಮಿಯ 49:8

ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ.

ಯೆಹೆಜ್ಕೇಲ 25:13

ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು.

ಯೆಹೆಜ್ಕೇಲ 27:6

ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್‌ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.

ಯೆಹೆಜ್ಕೇಲ 27:15

ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.

ಯೆಹೆಜ್ಕೇಲ 27:20

ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.

Interlinear

Choose Theme