Home Bibles ಆದಿಕಾಂಡ 26:1 · ಕನ್ನಡ ಬೈಬಲ್
ಆದಿಕಾಂಡ 26:1 · ಕನ್ನಡ ಬೈಬಲ್

ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.

Cross references

ಆದಿಕಾಂಡ 12:10

ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.

ಆದಿಕಾಂಡ 20:1

ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.

ಆದಿಕಾಂಡ 21:22

ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.

ಆದಿಕಾಂಡ 25:11

ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.

Interlinear

Choose Theme