Home Bibles ಆದಿಕಾಂಡ 26:28 · ಕನ್ನಡ ಬೈಬಲ್
ಆದಿಕಾಂಡ 26:28 · ಕನ್ನಡ ಬೈಬಲ್

ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;

Cross references

ಆದಿಕಾಂಡ 21:22

ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.

ಆದಿಕಾಂಡ 21:23

ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.

ಆದಿಕಾಂಡ 21:31

ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.

ಆದಿಕಾಂಡ 24:3

ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ

ಆದಿಕಾಂಡ 24:41

ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.

ಆದಿಕಾಂಡ 31:44

ಆದದರಿಂದ ನೀನು ಈಗ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ; ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದನು.

ಆದಿಕಾಂಡ 31:49

ಮಿಚ್ಪಾ ಎಂದೂ ಹೆಸರಾಯಿತು. ಯಾಕಂದರೆ--ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಕರ್ತನು ನಮ್ಮನ್ನು ಕಾಪಾಡಲಿ.

ಆದಿಕಾಂಡ 39:5

ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.

ಯೆಹೋಶುವ 3:7

ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.

1 ಸಮುವೇಲ 18:28

ಆದರೆ ಕರ್ತನು ದಾವೀದನ ಸಂಗಡ ಇದ್ದಾನೆಂದೂ ತನ್ನ ಮಗಳಾದ ವಿಾಕಲಳು ಅವನನ್ನು ಪ್ರೀತಿಮಾಡಿದ್ದಾಳೆಂದೂ ಸೌಲನು ತಿಳುಕೊಂಡನು;

2 ದಿನವೃತ್ತಾಂತ 1:1

ದಾವೀದನ ಮಗನಾದ ಸೊಲೊಮೋ ನನು ತನ್ನ ರಾಜ್ಯದಲ್ಲಿ ಬಲಗೊಂಡನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದು ಅವನನ್ನು ಅಧಿಕವಾಗಿ ಹೆಚ್ಚಿಸಿದನು.

2 ದಿನವೃತ್ತಾಂತ 15:9

ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.

ಯೆಶಾಯ 45:14

ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.

ಯೆಶಾಯ 60:14

ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.

ಯೆಶಾಯ 61:6

ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.

ಯೆಶಾಯ 61:9

ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.

ರೋಮಾಪುರದವರಿಗೆ 8:31

ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

1 ಕೊರಿಂಥದವರಿಗೆ 14:25

ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.

ಹೆಬ್ರಿಯರಿಗೆ 6:16

ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.

ಹೆಬ್ರಿಯರಿಗೆ 13:5

ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.

Interlinear

Choose Theme