Home Bibles ☰ Books ಆದಿಕಾಂಡ 27:35 · ಕನ್ನಡ ಬೈಬಲ್
ಆದಿಕಾಂಡ 27:35 · ಕನ್ನಡ ಬೈಬಲ್

ಅವನು --ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತಕ್ಕೊಂಡಿದ್ದಾನೆ ಅಂದನು.

Cross references

ಆದಿಕಾಂಡ 27:19

ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.

ಆದಿಕಾಂಡ 29:25

ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು.

2 ಅರಸುಗಳು 10:19

ಆದದರಿಂದ ಬಾಳನ ಎಲ್ಲಾ ಪ್ರವಾದಿಗಳನ್ನೂ ಸೇವಕರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ; ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು ಅಂದನು. ಯಾಕಂದರೆ ಯೇಹುವು ಬಾಳನನ್ನು ಆರಾಧಿಸುವ ವರನ್ನು ನಾಶಮಾಡುವ ಹಾಗೆ ಇದನ್ನು ತಂತ್ರದಿಂದ ಮಾಡಿದನು.

ಯೋಬ 13:7

ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ?

ಮಲಾಕಿ 2:10

ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?

ರೋಮಾಪುರದವರಿಗೆ 3:7

ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು?

2 ಕೊರಿಂಥದವರಿಗೆ 4:7

ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.

1 ತೆಸಲೋನಿಕದವರಿಗೆ 4:6

ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.

Interlinear

Choose Theme