ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
Cross references
ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.
ಆಗ ಯಾಕೋಬನು--ಈ ಹೊತ್ತು ನಿನ್ನ ಚೊಚ್ಚಲತನವನ್ನು ನನಗೆ ಮಾರು ಅಂದನು.
ಯಾಕೋಬನು-- ಈ ಹೊತ್ತು ನನಗೆ ಪ್ರಮಾಣಮಾಡು ಅಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ ತನ್ನ ಚೊಚ್ಚಲತನವನ್ನು ಅವನಿಗೆ ಮಾರಿದನು.ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.