ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.
Cross references
ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು.
ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು.
ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.